Featured, ಇತರೆ, ಸ್ಥಳೀಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಭೇಟಿ. ಮಡಪ್ಪಾಡಿಗೆ ಇಂದೇ ಬಸ್ ಸಂಚಾರ ಆರಂಭ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಎಸ್ಆರ್ಟಿಸಿ ಅಧಿಕಾರಿಗಳನ್ನು ಇಂದು( 07/07/3025)
ಭೇಟಿ ಮಾಡಲಾಯಿತು.  ಈ ಸಂದರ್ಭದಲ್ಲಿ ಮಡಪಾಡಿಗೆ ಸಂಜೆ ಬಸ್ ಸಂಚಾರ ಆರಂಭಿಸುವಂತೆ ಮತ್ತು ಅಲ್ಲೇ ವಾಸ್ತವ್ಯ ಇದ್ದು ಮರುದಿನ ಬೆಳಿಗ್ಗೆ ಬಸ್ ಸಂಚಾರ ಆರಂಭಿಸುವಂತೆ ಮನವಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಇಂದು ಸಂಜೆ 6.15 ಕ್ಕೆ ಮಡಪಾಡಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ ಮತ್ತು ಅದೇ ಬಸ್ ಮಡಪಾಡಿಯಲ್ಲಿ ವಾಸ್ತವ್ಯ ಇದ್ದು ಮರುದಿನ ಬೆಳಗ್ಗೆ 7.15 ಕ್ಕೆ ಹೊರಡಲು ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಇನ್ನು ಕೆಲವೇ ಕೆಲವು ದಿನಗಳಲ್ಲಿ ಆಲೆಟ್ಟಿ ಗ್ರಾಮದ ಬಡ್ಡಡ್ಕಕೆ, ಮತ್ತು ಬೆಳಿಗ್ಗೆ 7 ಗಂಟೆಯಿಂದ ಸುಬ್ರಹ್ಮಣ್ಯದಿಂದ ಹೊರಟು ದುಗಲಡ್ಕ ಮೂಲಕ ಕೊಡಿಯಾಲ ಬೈಲು ಮೂಲಕ ಸುಳ್ಯ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಅಧ್ಯಕ್ಷರಾದ ಪಿ ಸಿ ಜಯರಾಮ, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಯಾದ ಪಿ ಎಸ್ ಗಂಗಾಧರ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಇದರ ಅಧ್ಯಕ್ಷರಾದ ಭರತ್ ಮುಂಡೋಡಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನಗಳ ಸಮಿತಿ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಪಂಚಾಯತ್ ಇದರ ಕೆಡಿಪಿ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನಗಳ ಸಮಿತಿ ಇದರ ಸದಸ್ಯರಾದ ಸೋಮಶೇಖರ ಕೇವಳ ಉಪಸ್ಥಿತರಿದ್ದರು.

m

Related Posts