ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ತರಗತಿಯಲ್ಲಿ ಪಾಠದ ಸಮಯದ ನಡುವೆ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ
ಮೃತ ಪಟ್ಟ ವಿದ್ಯಾರ್ಥಿ ಮನೋಜ್ ಕುಮಾರ್ (10) ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮೃತಪಟ್ಟ ಮನೋಜ್ ನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎನ್ನಲಾಗಿದೆ, ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ





m

