Featured, ಅಂಕಣ, ರಾಜ್ಯ

ಎಲ್‌ಕೆಜಿಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಸೇವೆ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತಷ್ಟು ಬೆಳಗಿಸಲು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಹಾಕಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು ತಮ್ಮ ಎಕ್ಸ್ (ಹಳೆಯ ಟ್ವಿಟರ್) ಖಾತೆಯಲ್ಲಿ ಪ್ರಕಟಣೆ ಹಂಚಿಕೊಂಡಿದ್ದಾರೆ.

ಅದರಂತೆ, ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಲ್ಲಿ (KPS) ಎಲ್‌ಕೆಜಿ (LKG) ಯಿಂದ ಪಿಯುಸಿ (PUC) ತನಕ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಈ ಕ್ರಮದ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಾಜರಾತಿ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಉಚಿತ ಸಾರಿಗೆ ಸೌಲಭ್ಯದಿಂದಾಗಿ ಮಕ್ಕಳಿಗೆ ಶಾಲೆಗೆ ಆಗಾಗ್ಗೆ ಆಗುವ ಸಂಚಾರದ ತೊಂದರೆ ನಿವಾರಣೆ ಆಗಲಿದ್ದು, ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಇದು ದೊಡ್ಡ ಅನುಕೂಲವಾಗಲಿದೆ.

ಈ ಯೋಜನೆ ಸರ್ಕಾರಿ ಶಾಲೆಗಳ ಪ್ರತಿಷ್ಠೆಯನ್ನು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ನಿಜವಾದ ಬದಲಾವಣೆ ತರಲಿರುವ ಹೆಜ್ಜೆಯಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

m

Related Posts