Featured, ಅಂಕಣ, ಸ್ಥಳೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ ಹಿನ್ನಲೆ : ಎಸ್‌ಡಿಪಿಐ ಪೂರ್ವಭಾವಿ ಸಭೆ

ಕಡಬ: ಮುಂಬರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಘೋಷಣೆ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕಡಬ ಬ್ಲಾಕ್ ಸಮಿತಿ ಅಧ್ಯಕ್ಷರಾದ ಬಶೀರ್ ವಹಿಸಿದರು.

ಪಟ್ಟಣ ಪಂಚಾಯತ್ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಭಾಗವಹಿಸಲು ತೀರ್ಮಾನಿಸಲಾಯಿತು. ವ್ಯಾಪ್ತಿಯ 13 ವಾರ್ಡ್ ಗಳ ಹಾಗೂ ಅಭ್ಯರ್ಥಿಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಯಿತು. ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷರು ಚುಣಾವನೆ ಉಸ್ತಿವಾರಿಯೂ ಆದ ಮೂನಿಶ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ ವೀಕ್ಷಕರಾಗಿ ಆಗಮಿಸಿದರು.

ಸಭೆಯಲ್ಲಿ ಸುಳ್ಯ ವಿಧಾನಸಭಾ ಅಧ್ಯಕ್ಷರಾದ ಮಿರಾಝ್ ಸುಳ್ಯ, ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಉಪಸ್ಥಿತರಿದ್ದರು.

m

Related Posts