ಕೊಯನಾಡು (ಕೊಡಗು): ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಕಾರು ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯು ಬಲಿಯಾದಂತಾಗಿದೆ.
ಅಪಘಾತದ ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸುಳ್ಯದತ್ತ ಚಿಕಿತ್ಸೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಅಪಘಾತದ ನಿಖರ ಮಾಹಿತಿ ಹಾಗೂ ಮೃತರು, ಗಾಯಾಳುಗಳ ವಿವರಗಳು ಇನ್ನೂ ನಿರೀಕ್ಷೆಯಲ್ಲಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.





m
