ಚೆಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ಮಾನವ-ಪ್ರಾಣಿ ಸಂಘರ್ಷ, ವನ್ಯಪ್ರಾಣಿಗಳಿಂದ ಆಸ್ತಿ ಹಾಗೂ ಕೃಷಿ ಹಾನಿ ಸಮಸ್ಯೆಗಳ ಕುರಿತು ಹಾಗೂ ಅರಣ್ಯ ಅಂಚಿನ ನಿವಾಸಿಗಳ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಯಿತು..

ಈ ಸಭೆಯಲ್ಲಿ ಚೆಂಬು, ಸಂಪಾಜೆ ಹಾಗೂ ಪೆರಾಜೆ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿ, ಮಾನ್ಯ ಶಾಸಕರಲ್ಲಿ ತಮ್ಮ ಅಹವಾಲುಗಳನ್ನು ಹೇಳಿಕೊಂಡು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಲಹೆ-ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ಆನೆಗಳಿಂದಾಗುತ್ತಿರುವ ಕೃಷಿಹಾನಿ, ಅರಣ್ಯ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಆಗುತ್ತಿರುವ ತೊಡಕುಗಳು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗಳನ್ನು ಮಾನ್ಯ ಶಾಸಕರಿಗೆ ಮನದಟ್ಟು ಮಾಡಿಕೊಂಡಾಗ ಮಾನ್ಯ ಶಾಸಕರು, ಮೇಲಿನ ಹಂತದಲ್ಲಿ ಚರ್ಚಿಸಿ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ರವಿರಾಜ್ ಹೊಸೂರು, ಸೂರಜ್ ಹೊಸೂರು, ಹನೀಫ್ ಎಸ್ ಪಿ ಸರಕಾರಿ ನಾಮ ನಿರ್ದೇಶಕ ಅಧ್ಯಕ್ಷರುಗಳು/ಸದಸ್ಯರುಗಳು, ಡಿಸಿಸಿ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪ್ರಮುಖರು, ಸ್ಥಳೀಯ ಮುಖಂಡರುಗಳು ಚೆ0ಬು, ಸಂಪಾಜೆ, ಪೆರಾಜೆಯ ಪಕ್ಷದ ಕಾರ್ಯಕರ್ತರು, ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಲಾಯಿತು.





m
