ಕುಶಾಲನಗರ: ಕುಶಾಲನಗರದ ಆನೆಕಾಡು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಳ್ಯ ಮೂಲದ ಪೆರುವಾಜೆ ಅರ್ನಾಡಿ ನಿವಾಸಿ ಕಾತಿರ್ಕ್ ಭಟ್ (ಬೈಕ್ ಸವಾರ) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮಡಿಕೇರಿಯಿಂದ ಕುಶಾಲನಗರದತ್ತ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ಸವಾರ ಕಾರ್ತಿಕ್ ಗಂಭೀರ ಗಾಯಗಳಾಗಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.




m
