ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಜಟಿಲವಾಗಿರುವ ಕೆಂಪು ಕಲ್ಲು ಹಾಗೂ ಮರಳುಗಾರಿಕೆ ಸಂಬಂಧಿಸಿ ಕಾನೂನು ಸರಳೀಕರಣಗೊಳಿಸಿ ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಸಿಗುವಂತಾಗಲು ಕ್ರಮಕೈಗೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿತಲ್ಲದೇ, ಕೋಮು ಸಂಘರ್ಷ ಹತ್ತಿಕ್ಕಲು ವಿಶೇಷ ಕಾರ್ಯ ಪಡೆ ರಚಿಸಿದ್ದಕ್ಕೆ ಅಭಿನಂದಿಸಿತು.

ನಿಯೋಗವು ಗೃಹ ಸಚಿವ ಡಾ| ಜಿ.ಪರಮೇಶ್ವರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮತ್ತಿತರ ಸಚಿವರು, ಅಧಿಕಾರಿಗಳನ್ನು ಭೇಟಿಯಾಗಿ ಕೆಂಪು ಕಲ್ಲು ಹಾಗೂ ಮರಳುಗಾರಿಕೆ ಸಮಸ್ಯೆ ಬಗೆಹರಿಸುವಂತೆ ಕೋರಿತು. ಇದೇ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್.ರಾಡ್ರಿಗಸ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಸದಸ್ಯ ಮೊಹಮ್ಮದ್ ಶರೀಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ, ಉದ್ಯಮಿಗಳಾದ ಪದ್ಮನಾಭ ಕೋಟ್ಯಾನ್, ಉಮೇಶ್ ಸಾಲ್ಯಾನ್ ನಿಯೋಗದಲ್ಲಿದ್ದರು.






m
