ಕೊಯನಾಡು, ಆಗಸ್ಟ್ 6:ಕೊಯನಾಡು ಚೆಡಾವು ತಿರುವಿನಲ್ಲಿ ಇಂದು 800 ಕಾರು ಮತ್ತು ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿದೆ. ಪರಸ್ಪರ ಡಿಕ್ಕಿಯಾಗಿದ್ದರಿಂದ ವಾಹನಗಳಿಗೆ ಹಾನಿಯಾಗಿದೆ.
ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಪಘಾತದ ತೀವ್ರತೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಸ್ಥಳಕ್ಕೆ ಪೊಲೀಸರು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಬಗ್ಗೆ ತನಿಖೆ ಮುಂದುವರೆದಿದೆ.





m

