Featured, ಆರೋಗ್ಯ, ಇತರೆ, ಸ್ಥಳೀಯ

ತಾಲೂಕು ಆಸ್ಪತ್ರೆಗಳಿಗೆ ಬಲವರ್ಧನೆ : ತಜ್ಞ ವೈದ್ಯರ ನೇಮಕಕ್ಕೆ ಸರ್ಕಾರ ಕ್ರಮ : ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಇಬ್ಬರು ಸ್ತ್ರೀ ರೋಗ ತಜ್ಞರ’ ನೇಮಕ : ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಗುರುವಾರ (07/08/2025) ನಡೆದ ಸುದ್ದಿಗೋಷ್ಟಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ ಅವರು ಮಾತಾನಾಡಿ ಈ ಬಾರಿಯ ಕೌನ್ಸಲಿಂಗ್ ನಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ನೇಮಕಾತಿ ಮಾಡಲಾಗಿದೆ ಎಂದರು.8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟಿದ್ದಾರೆ

ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ ನೀಡುವ ಉದ್ದೇಶದಿಂದ ತಾಲೂಕು ಆಸ್ಪತ್ರೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ವೈದ್ಯರ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆರೈಕೆ ವಿಭಾಗದಲ್ಲಿ ದೀರ್ಘಕಾಲದಿಂದ ಖಾಲಿಯಿದ್ದ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಲಾಗಿದೆ.

ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ ಒಬ್ಬ ಸ್ತ್ರೀರೋಗ ತಜ್ಞ, ಅರವಳಿಕೆ ತಜ್ಞ ಮತ್ತು ಮಕ್ಕಳ ತಜ್ಞರಿರುವಂತೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿದೆ. ಮುಂದಿನ ಹಂತದಲ್ಲಿ ಪ್ರತಿಯೊಂದು ಆಸ್ಪತ್ರೆಯಲ್ಲಿ ಇಬ್ಬರು ತಜ್ಞರನ್ನು ನಿಯೋಜಿಸುವ ಯೋಜನೆಯನ್ನೂ ಸರ್ಕಾರ ರೂಪಿಸಿದೆ.

ಈ ನಿಯಮಿತ ವೈದ್ಯ ಲಭ್ಯತೆಯೊಂದಿಗೆ, ಗ್ರಾಮೀಣ ಭಾಗದ ಸೌಲಭ್ಯಗಳು ಸುಧಾರಿಸಲಿದೆ. ಇದರ ಅನುಮೋದನೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪಡೆಯಲಾಗುವುದು ಎಂದು ಗುಂಡೂರಾವ್ ತಿಳಿಸಿದರು.

ಈ ಕ್ರಮದಿಂದ ತಾಲೂಕು ಮಟ್ಟದ ಆರೋಗ್ಯ ಸೇವೆ ಸುಧಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

m

Related Posts