Featured, ಇತರೆ, ಸ್ಥಳೀಯ

ರಾಷ್ಟ್ರೀಯ ಕೈಮಗ್ಗ ದಿನಾಚರಣೆ – ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಡಿಆರ್ ಗಾರ್ಮೆಂಟ್ಸ್‌ಗೆ ಭೇಟಿ

ಸುಳ್ಯ: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು ಹಳೆಯ ಗೇಟು, ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್. ಗಾರ್ಮೆಂಟ್ಸ್ ಮಳಿಗೆಗೆ ವಿಶೇಷ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ಕೈಮಗ್ಗ ಉತ್ಪನ್ನಗಳ ವ್ಯಾಪಾರವು ಉತ್ತಮ ರೀತಿಯಲ್ಲಿ ಸಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು. ಖಾದಿ ಬಟ್ಟೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಮಳಿಗೆಯ ಮಾಲಕರಾದ ರಾಮಚಂದ್ರ ಅವರನ್ನು ಸನ್ಮಾನಿಸಲಾಯಿತು ಹಾಗೂ ಸ್ಥಳೀಯ ಉತ್ಪಾದನೆಗೆ ನೀಡುತ್ತಿರುವ ಕೊಡುಗೆಗೆ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಶಿಕಲಾ, ಶ್ರೀಮತಿ ಲೋಲಾಕ್ಷಿ, ಕಾರ್ಯದರ್ಶಿ ಭಾರತಿ ಪುರುಷೋತ್ತಮ, ಮಂಡಲ ಪ್ರಧಾನ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ದಿವ್ಯ ಮಡಪ್ಪಾಡಿ, ರಜನಿ ಶರತ್ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು. ಜೊತೆಗೆ ಡಿಆರ್ ಗಾರ್ಮೆಂಟ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 35 ಮಂದಿ ಮಹಿಳಾ ಉದ್ಯೋಗಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು ಮತ್ತು ಕೈಮಗ್ಗ ಉದ್ಯಮದ ಪ್ರೋತ್ಸಾಹಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯಶಸ್ವಿಯಾಯಿತು.

m

Related Posts