Featured, ಅಂಕಣ, ಸ್ಥಳೀಯ

ಸವಣೂರು ಗ್ರಾಮದಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಗುದ್ದಲಿಪೂಜೆ

ಸವಣೂರು: ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಇಂದು ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರು ಗುದ್ದಲಿಪೂಜೆ ನೆರವೇರಿಸಿದರು.

ಈ ಆರೋಗ್ಯ ಕೇಂದ್ರ ಕೇಂದ್ರ ಸರ್ಕಾರದ ₹65 ಲಕ್ಷ ಅನುದಾನದೊಂದಿಗೆ ಸ್ಥಾಪಿತವಾಗಲಿದೆ.

ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷೆ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ನಾಯಕ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ, ಆಶಾ ಕಾರ್ಯಕರ್ತೆಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಈ ಮಹತ್ವದ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.

ಆರೋಗ್ಯ ಸೌಲಭ್ಯ ವಿಸ್ತರಣೆಗೆ ಈ ಕೇಂದ್ರ ನೆರವಾಗಲಿದೆ ಎಂಬ ನಿರೀಕ್ಷೆಯೊಂದಿಗೆ, ಸ್ಥಳೀಯರು ಸಂತೋಷ ವ್ಯಕ್ತಪಡಿಸಿದರು.

m

Related Posts