ಮಂಗಳೂರು, ಆ.17:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಮುನ್ಸೂಚನೆ ನೀಡಿದೆ.
ಇದರಿಂದಾಗಿ ಆ.18 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ





m

