ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ (ರಿ) ಹಾಗೂ SKSSF ಅರಂತೋಡು ಶಾಖೆಯ ಆಶ್ರಯದಲ್ಲಿ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರವು ಆಗಸ್ಟ್ 30 ಶನಿವಾರ ಮತ್ತು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಅರಂತೋಡು ಪಟೇಲ್ ಕಾಂಪ್ಲೆಕ್ಸ್‌ನಲ್ಲಿ ಜರುಗಲಿದೆ. ಶಿಬಿರದಲ್ಲಿ ಭಾಗವಹಿಸಲು ಅಗತ್ಯವಿರುವ ಟೋಕನ್‌ಗಳನ್ನು ಸ್ಥಳದಲ್ಲೇ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಶಿಕ್ (9845628109), ಝಬೈರ್ (7624990211), ತಾಜುದ್ದೀನ್ (735362318) ಇವರನ್ನು ಸಂಪರ್ಕಿಸಲು ಸಂಘಟಕರು ಮನವಿ ಮಾಡಿದ್ದಾರೆ.





m
