Featured, ಅಂಕಣ, ಸ್ಥಳೀಯ

ಶಾಲಾ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ: ದೆಹಲಿಯ ಪ್ರಸಿದ್ಧ ಧರ್ಮೋಪದೇಶಕ ಪರಾರಿ;

ದೆಹಲಿ: ದೆಹಲಿಯ ವಸಂತ್ ಗಂಜ್ ಪ್ರದೇಶದ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥಸಾರಥಿ ವಿರುದ್ಧ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಅವರು ತಲೆಮರೆಸಿಕೊಂಡಿರುವುದಾಗಿ ವರದಿಯಾಗಿದೆ.

ಚೈತನ್ಯನಂದ ಸರಸ್ವತಿ ಎಂದೂ ಕರೆಯಲ್ಪಡುವ ಪಾರ್ಥಸಾರಥಿ ಅವರು ದೆಹಲಿಯ ವಸಂತ ಗಂಜ್‌ನಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿದ್ದರು. ಹದಿನೇಳು ವಿದ್ಯಾರ್ಥಿನಿಯರು ಅವರ ವಿರುದ್ಧ ಲೈಂಗಿಕ ಕಿರುಕುಳ, ಅಶ್ಲೀಲ ಭಾಷೆ ಮತ್ತು ಅಶ್ಲೀಲ ವಾಟ್ಸಾಪ್/ಎಸ್‌ಎಂಎಸ್ ಸಂಭಾಷಣೆಗಳಿಗಾಗಿ ದೂರು ದಾಖಲಿಸಿದ್ದಾರೆ.

ಆಗಸ್ಟ್ 4 ರಂದು ವಸಂತ್ ಗಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೆಹಲಿ ಪೊಲೀಸರು ಲೈಂಗಿಕ ಕಿರುಕುಳ ಮತ್ತು ನಕಲಿ ದಾಖಲೆ ಸೃಷ್ಟಿ ಆರೋಪದ ಮೇಲೆ ಚೈತನ್ಯಾನಂದ ಸರಸ್ವತಿ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ತನಿಖೆಯ ಸಮಯದಲ್ಲಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯೂಎಸ್) ವಿದ್ಯಾರ್ಥಿವೇತನದಡಿಯಲ್ಲಿ ಓದುತ್ತಿರುವ 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಅವರಲ್ಲಿ 17 ಮಂದಿ ಚೈತನ್ಯಾನಂದ ಸರಸ್ವತಿ ತಮ್ಮೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ, ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲವು ಶಿಕ್ಷಕರು ಮತ್ತು ಆಡಳಿತಾಧಿಕಾರಿಗಳು ತಮ್ಮ ಇಚ್ಛೆಗೆ ಅನುಗುಣವಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಚೈತನ್ಯಾನಂದ ಸರಸ್ವತಿ ವಿರುದ್ಧ ಪಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು ಮತ್ತು ನಂತರ ಬಾಧಿತ ವಿದ್ಯಾರ್ಥಿಗಳು ನ್ಯಾಧೀಶರ ಮುಂದೆ ಸಾಕ್ಷ್ಯ ನುಡಿದಿದ್ದಾರೆ.

ಸಂಸ್ಥೆಯ ನೆಲಮಾಳಿಗೆಯಿಂದ ಇವರು ಬಳಸುತ್ತಿದ್ದ ನಕಲಿ ನಂಬರ್ ಪ್ಲೇಟ್ 39 UN 1 ಹೊಂದಿರುವ ವೋಲ್ವೋ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೈತನ್ಯನಂದ ಸರಸ್ವತಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಸಕ್ರಿಯವಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿದೆ.

m

Related Posts