ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದ ಭೈರಪ್ಪನವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ.





m

