Featured, ಅಂಕಣ, ಸ್ಥಳೀಯ

ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಟಿ ಎಂ ಶಹೀದ್ ತೆಕ್ಕಿಲ್ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (AICC)  ಟಿ. ಎಂ. ಶಹೀದ್ ತೆಕ್ಕಿಲ್ ರವರನ್ನು ನೇಮಿಸಿದೆ.

ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಸೇವೆಯಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಮೂಡಿಸಿರುವ ಶಹೀದ್ ತೆಕ್ಕಿಲ್, ಜನಪರ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿದ್ದಾರೆ. ಸರಳತೆಯ ಪ್ರತೀಕ, ಕ್ರಿಯಾಶೀಲ ರಾಜಕಾರಣಿ ಹಾಗೂ ಅಭಿವೃದ್ಧಿ ಹರಿಕಾರರಾಗಿರುವ ಇವರು ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ತೆಕ್ಕಿಲ್ ಪ್ರತಿಷ್ಠಾನದ (ರಿ) ಸ್ಥಾಪಕರು, ತೆಕ್ಕಿಲ್ ಶಿಕ್ಷಣ ಸಂಸ್ಥೆ ಗೂನಡ್ಕ–ಸಂಪಾಜೆ ಇದರ ಸ್ಥಾಪಕಾಧ್ಯಕ್ಷರಾಗಿರುವ ಅವರು, ಪೇರಡ್ಕ–ಗೂನಡ್ಕ ಮುಹಿಯದ್ದೀನ್ ಜುಮಾ ಮಸೀದಿ ಹಾಗೂ ದರ್ಗಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿಷ್ಠಿತ ತೆಕ್ಕಿಲ್ ಕುಟುಂಬದ ದಾನಿಯಾಗಿ, ಸಮಾಜಮುಖಿ ಚಿಂತನೆಗೆ ಮುಂಚೂಣಿಯಲ್ಲಿರುವ ಇವರು ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಸಮಿತಿ, ರಾಜ್ಯ ಅಲ್ಪಸಂಖ್ಯಾತರ ಘಟಕಗಳಲ್ಲಿ ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಅಲ್ಲದೆ, ಕೆಪಿಸಿಸಿ ಕಾರ್ಯದರ್ಶಿ, ವಕ್ತಾರ, ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತರ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸದಸ್ಯ ಹಾಗೂ ಕರ್ನಾಟಕ ರಾಜ್ಯ ವಖ್ಫ್ ಕೌನ್ಸಿಲ್ (ಪರಿಷತ್) ಸದಸ್ಯರಾಗಿ ಸೇವೆ ಸಲ್ಲಿಸಿರುವ ಅನುಭವ ಇವರದಾಗಿದೆ.

ಹಲವಾರು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ದುಡಿದು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಪರ ನಾಯಕನಾಗಿ ಹೆಸರು ಗಳಿಸಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ವಿವಿಧ ವಲಯಗಳಿಂದ ಹೃತ್ಪೂರ್ವಕ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

 

m

Related Posts