Featured, ರಾಜ್ಯ, ಸ್ಥಳೀಯ

ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಟಿ.ಎಂ. ಶಾಹಿದ್ ತೆಕ್ಕಿಲ್ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ (IAS) ಅವರಿಂದ ಅಧಿಕಾರ ಸ್ವೀಕರಿಸಲಾಯಿತು.

ನಂತರ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಬೃಹತ್ ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಉತ್ಪಾದನ ವಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು

m

Related Posts