ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣದ ಮೂಲಕ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ. ಈ ಸಾಧನೆಗಾಗಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ. ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿರುವ ಈ ಯೋಜನೆ ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಔದ್ಯೋಗಿಕ ಸಬಲೀಕರಣಕ್ಕೆ ಕೊಡುಗೆ ನೀಡಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವ ರಾಮಲಿಂಗ ರೆಡ್ಡಿ, ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರು ಹಾಗೂ ಮಹಿಳಾ ಪ್ರಯಾಣಿಕರಿಗೆ ಧನ್ಯವಾದ ತಿಳಿಸಿದ್ದಾರೆ.





m
