ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು SDPI ದೊಡ್ಡಬಳ್ಳಾಪುರ ಸಮಿತಿಯ ಸದಸ್ಯರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ವತಿಯಿಂದ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನ ಅಂಗವಾಗಿ ಅವರನ್ನ ನೆನೆಸಿಕೊಂಡು ಪಕ್ಷದ ಕಚೇರಿ ಯಲ್ಲಿ ಪದಾಧಿಕಾರಿಗಳು ಮಾತನಾಡಿದರು.
ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದ ಕಾಲದಲ್ಲೇ ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾರಗೊಳಿದರು ಎಂದರು.

ದೊಡ್ಡಬಳ್ಳಾಪುರದ ಯಾವುದಾದ್ರೂ ಮುಖ್ಯ ರಸ್ತೆಗೆ ದಿವಾನ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿಡಬೇಕು ಯಂದು SDPI ದೊಡ್ಡಬಳ್ಳಾಪುರ ಸಮಿತಿ ಅಧಿಕಾರಿಗಳಿಗೆ ವಿನಂತಿಸುತ್ತಿದೆ.




m
