ಜ್ಞಾನಾರ್ಜನೆಯ ದೃಷ್ಟಿಯಿಂದ ಪರೀಕ್ಷೆಗಾಗಿ ಓದೋಣ’ ; ಕೆ.ರಾಜು ಮೊಗವೀರ
ಕೊಣಾಜೆ : ‘ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಉದ್ಯೋಗಕ್ಕಾಗಿ ಮಾತ್ರ ಓದದೆ ಜ್ಞಾನ ಬೆಳವಣಿಗೆಯ ದೃಷ್ಟಿಯಿಂದ ಓದಬೇಕು, ಹಾಗೆ ಓದಿದರೆ ಅಂಧಕಾರವು ಇಲ್ಲವಾಗುತ್ತದೆ’ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ.ರಾಜು ಮೊಗವೀರ ಕೆ.ಎ.ಎಸ್ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ಕನಕ ಕಾಯಕ ದಾಸೋಹ ಸ್ಪರ್ಧಾತ್ಮ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ. ನಾಗಪ್ಪ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕನಕ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಧ್ಯಾಪಕರಾದ ಡಾ. ಯಶು ಕುಮಾರ್.ಡಿ ಉಪಸ್ಥಿತರಿದ್ದರು. ದುಶ್ಯಂತ್ ವಂದಿಸಿ, ಸುಮನ್ ಜಬೀನ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.





m

