Featured, ಇತರೆ, ಸ್ಥಳೀಯ

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿಮೂವರ ದುರ್ಮರಣ!

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ

ಕಲಬುರ್ಗಿ: ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಕಲಬುರಗಿ ಬಳಿಯ ಜೇವರ್ಗಿ ಹೆದ್ದಾರಿಯಲ್ಲಿ ಮೃತಪಟ್ಟಿದ್ದಾರೆ. ದಾರಿ ಮಧ್ಯೆ ಬಂದ ನಾಯಿಯೊಂದನ್ನು ಪಾರು ಮಾಡಲು ಹೋಗಿ ಕಾರು ಅಪಘಾತವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಳಗಿ ಅವರು ಸಂಬಂಧಿಕರ ಮದುವೆಗೆಂದು ತಮ್ಮ ಸಹೋದರ ಶಂಕರ ಬೀಳಗಿ ಹಾಗೂ ಸೋದರ ಸಂಬಂಧಿ ಈರಣ್ಣ ಶಿರಸಂಗಿ ಜತೆಗೆ ಕಲಬುರಗಿ ನಗರಕ್ಕೆ ಹೊರಟಿದ್ದರು.
ಕೆಎ 04, ಎನ್‌ 7982 ಸಂಖ್ಯೆ ಇನೋವಾ ಹೈಕ್ರಾಸ್‌ ಕಾರಿನಲ್ಲಿ ಹೊರಟಾಗ ವಿಜಯಪುರ ಜೇವರ್ಗಿ ಹೆದ್ದಾರಿಯ ಗೌನಹಳ್ಳಿ ಬಳಿಕ ಸಂಜೆ 5.30 ಕ್ಕೆ ಘಟನೆ ಅಪಘಾತವಾಗಿದೆ.
ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಟ್ಟಿ
ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಒಮ್ಮೆಗೆ ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಇಳಿಜಾರಿಗೆ ಬಿದ್ದಿದೆ. ಪಲ್ಟಿಯಾದ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಲ್ಲರಿಗೂ ಭೀಕರ ಗಾಯಗಳಾಗಿವೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತೇಶ್‌ ಬೀಳಗಿ
ಅಪಘಾತ ಕಂಡು ಸ್ಥಳೀಯರು ಕಾರ್‌ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಶಂಕರ ಬೀಳಗಿ ಈರಣ್ಣ ಶಿರಸಂಗಿ ಅವರ ತಲೆ, ಕೈ ಕಾಲು, ಕಿವಿಯ ಭಾಗಕ್ಕೆ ಭಾರೀ ಪೆಟ್ಟುಬಿದ್ದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸುರಕ್ಷತಾ ಬಲೂನ್‌ಗಳು ಕೂಡ ಜೀವಕ್ಕೆ ರಕ್ಷಣೆ ನೀಡಿಲ್ಲ. ಮಹಾಂತೇಶ್‌ ಬೀಳಗಿಯವರಿಗೂ ತಲೆಗೆ ಗಂಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನವಾಗಿದೆ. ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.ಐಎಎಸ್‌ ಐಡಿ ಕಾರ್ಡ್‌ನಿಂದ ಗುರುತು ಪತ್ತೆ
ಅಪಘಾತ ಸ್ಥಳಕ್ಕೆ ಬಂದ ಸ್ಥಳೀಯರಿಗೆ ಸರ್ಕಾರಿ ಗುರುತಿನ ಚೀಟಿ ಸಿಕ್ಕಿದೆ. ಆಗ ಅವರು ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಎಂದು ತಿಳಿದುಬಂದಿದೆ. ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಿ ಎಂ ಸಿದ್ದರಾಮಯ್ಯ ಸಂತಾಪ.

ಮಹಾಂತೇಶ್‌ ಬೀಳಗಿ ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ” ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ” ಎಂದಿದ್ದಾರೆ.

 

Related Posts