ಸುಳ್ಯ ತಾಲೂಕು ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಶಾಲಿನಿಯವರು ಕಳೆದ ತಿಂಗಳಲ್ಲಿ 60ಕ್ಕೂ ಹೆಚ್ಚು ಹೆರಿಗೆ ಹಾಗೂ 25ಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ಹಿನ್ನೆಲೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯಿಂದ ಡಿ.2ರಂದು ಗೌರವಿಸಲ್ಪಟ್ಟರು. ಸಮಿತಿ ಸದಸ್ಯರು ಅವರ ಸೇವೆಯನ್ನು ಶ್ಲಾಘಿಸಿದರು.
ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಶಾಲಿನಿಯವರು ಸಾರ್ವಜನಿಕ ಆಸ್ಪತ್ರೆಯಲ್ಲಿ ನೀಡುತ್ತಿರುವ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಗುರುತಿಸಿ, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯವರು ಡಿಸೆಂಬರ್ 2ರಂದು ಅವರನ್ನು ವಿಶೇಷವಾಗಿ ಗೌರವಿಸಿದರು.
ಕಳೆದ ಒಂದೇ ತಿಂಗಳಲ್ಲಿ 60ಕ್ಕೂ ಹೆಚ್ಚು ಹೆರಿಗೆಗಳನ್ನು ಯಶಸ್ವಿಯಾಗಿ ನೆರವೇರಿಸಿ, 25 ಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆಯನ್ನು ಸಂಪೂರ್ಣ ಫಲಕಾರಿಯಾಗಿ ನಡೆಸಿದಕ್ಕಾಗಿ ಡಾ. ಶಾಲಿನಿಯವರ ಸೇವೆಯನ್ನು ಸಮಿತಿ ವಿಶೇಷವಾಗಿ ಮೆಚ್ಚಿದೆ. “ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಗೆ ಭರವಸೆಯ ಆರೋಗ್ಯ ಸೇವೆ ಒದಗಿಸುವಲ್ಲಿ ಅವರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಸಮಿತಿಯ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಶಹೀದ್ ಪಾರೆ, ರಾಧಾಕೃಷ್ಣ ಪರಿವಾರಕಾನ, ಚಂದ್ರನ್ ಕೂಟೇಲು, ಅಚ್ಚು ಪ್ರಗತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಲೀಲಾಧರ್ ಮೊದಲಾದವರು ಉಪಸ್ಥಿತರಿದ್ದರು.


