ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಾಲ ಕಲಾವಿದೆ ಸೋನಿಕಾ ಜನಾರ್ಧನ್ ರವರು ಮಂಗಳೂರಿನ ಸರಕಾರಿ ವಸತಿ ಗೃಹ ದಲ್ಲಿ ಭೇಟಿಯಾಗಿ ಭಾರತೀಯ ಸಂವಿಧಾನದ ಪೀಠಿಕೆ ಫಲಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿ ಗೌರವಿಸಿದರು.
ಸೋನಿಕಾ ಜನಾರ್ಧನ್ ರವರು ಸುಳ್ಯ ನ್ಯಾಯಾಲಯದಲ್ಲಿ ಎಪಿಪಿಯಾಗಿ ಕರ್ತವ್ಯ ನಿರ್ವಹಿಸಿದ ಬಿ ಜನಾರ್ದನ್ ರವರ ಪುತ್ರಿಯರಾಗಿದ್ದಾರೆ. ಪ್ರಸ್ತುತ ಇವರು ಮೈಸೂರು ನ್ಯಾಯಾಲಯದಲ್ಲಿ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪುಟ್ಟ ಬಾಲಕಿ ಭಾರತೀಯ ಸಂವಿಧಾನ ಪೀಠಿಕೆಯನ್ನು ವಿಶ್ವ ವಿಖ್ಯಾತ ಮೈಸೂರು ದಸರಾ ಯುವ ಸಂಭ್ರಮದಲ್ಲಿ ಹಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದನ್ನು ಮುಖ್ಯ ಮಂತ್ರಿಗಳು ನೆನಪಿಸಿಕೊಂಡು ಬಾಲ ಪ್ರತಿಭೆ ಸೋನಿಕಾ ರವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪದ್ಮರಾಜ್ ಪೂಜಾರಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ರಾವ್, ಜಿಲ್ಲಾ ಸರಕಾರಿ ವಕೀರಾದ ಎಂ. ಪಿ ನೊರೋನ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ ಜಗನಾಥ ರೈ, ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

