Featured, ಅಂಕಣ, ಸ್ಥಳೀಯ

ಹಿ.ಪ್ರ: ಅಗ್ನಿಶಾಮಕ ದಳದಲ್ಲಿ ಮಹಿಳೆಯರ ನೇಮಕ;

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಿನ್ನೆ ಗೃಹರಕ್ಷಕ ದಳದ 63ನೇ ಸ್ಥಾಪನಾ ದಿನವನ್ನು ಆಚರಿಸಲಾಯಿತು.

ಶಿಮ್ಲಾದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಗು, “ಹಿಮಾಚಲ ಸರ್ಕಾರ ಮಹಿಳಾ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದೆ. ಶೀಘ್ರದಲ್ಲೇ ಮಹಿಳೆಯರನ್ನು ಅಗ್ನಿಶಾಮಕ ದಳಕ್ಕೆ ಸೇರಿಸಿಕೊಳ್ಳಲಾಗುವುದು. ಇದಕ್ಕಾಗಿ ಅಗ್ನಿಶಾಮಕ ಇಲಾಖೆಯ ನೇಮಕಾತಿ ನಿಯಮಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುವುದು” ಎಂದು ಹೇಳಿದ್ದಾರೆ.

ಗೃಹರಕ್ಷಕ ದಳದ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಗು ಹೇಳಿದ್ದಾರೆ.

Related Posts