Featured, ಇತರೆ, ಸ್ಥಳೀಯ

2017ರ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್‌ಗೆ ಹೈಕೋರ್ಟ್‌ನಿಂದ ಖುಲಾಸೆ

ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿ 6 ಮಂದಿಯ ದೋಷ ಸಾಬೀತು

ಕೊಚ್ಚಿ: ಬಹುಭಾಷಾ ನಟಿಯ ಮೇಲೆ 2017ರಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಅವರನ್ನು ಕೇರಳ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುನೀಲ್ ಎನ್.ಎಸ್. ಅಲಿಯಾಸ್ ‘ಪಲ್ಸರ್ ಸುನಿ’ ಸೇರಿದಂತೆ ಆರು ಮಂದಿಗೆ ಕೋರ್ಟ್ ತಪ್ಪಿತಸ್ಥರೆಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಹನಿ ಎಂ. ವರ್ಗೀಸ್ ಅವರಿದ್ದ ವಿಶೇಷ ಪೀಠ ಈ ತೀರ್ಪು ಪ್ರಕಟಿಸಿದ್ದು, ನಟ ದಿಲೀಪ್ ಅವರನ್ನು ಹೊರತುಪಡಿಸಿ ಇನ್ನೂ ಮೂವರು ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ನಿರಾಪರಾಧಿಗಳೆಂದು ಘೋಷಿಸಿದೆ.

2017ರಲ್ಲಿ ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ನಟಿಯನ್ನು ಅಪಹರಿಸಿ, ಅವರ ಮೇಲೆಯೇ ಲೈಂಗಿಕ ಕಿರುಕುಳ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ನಟ ದಿಲೀಪ್ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ನಟ ದಿಲೀಪ್ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಬಹು ಚರ್ಚೆಗೆ ಗ್ರಾಸವಾದ ಈ ಪ್ರಕರಣ ಇದೀಗ ಅಂತಿಮ ತೀರ್ಪು ಕಂಡಿದ್ದು, ಕೇರಳ ಚಿತ್ರರಂಗದಲ್ಲಿ ಮತ್ತೆ ಭಾರೀ ಚರ್ಚೆಗೆ ಕಾರಣವಾಗಿದೆ.

 

Related Posts