ವಿದ್ಯಾರ್ಥಿಗಳಿಗೆ ಪೋಸ್ಕೊ, ಸೈಬರ್ ಅಪರಾಧ, ಮಾದಕ ವಸ್ತು ಹಾಗೂ ಟ್ರಾಫಿಕ್ ನಿಯಮಗಳ ಕುರಿತು ಜಾಗೃತಿ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಹಾಗೂ ಸುಳ್ಯ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ 2025 ಕಾರ್ಯಕ್ರಮ ದಿನಾಂಕ ಡಿ.9 ರಂದು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಬಿ ಪಿ ಇವರು ಸೈಬರ್ ಅಪರಾಧಗಳು, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಅಪರಾಧಗಳು ಹಾಗೂ ಟ್ರಾಫಿಕ್ ನಿಯಮಗಳು ಕುರಿತು ವಿವರವಾಗಿ ತಿಳಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು

ಇನ್ನೊಂದೆಡೆ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಸರಸ್ವತಿ ಅವರು ಪೋಸ್ಕೊ ಕಾಯ್ದೆ ಕುರಿತಂತೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸುರೇಶ್ ವಾಗ್ಲೆ ಅವರು ವಹಿಸಿದ್ದರು. ವೇದಿಕೆಯಲ್ಲಿ ರಾಣೆಯ ಸಿಬ್ಬಂದಿಗಳಾದ ಸಂತೋಷ, ಪ್ರಕಾಶ್ ಹಾಗೂ ರಾಜಶೇಖರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ನಿರೂಪಿಸಿದರು. ಪದ್ಮಕುಮಾರ್ ಅವರು ಸಹಕರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಪರಾಧ ತಡೆ ಕುರಿತ ಅರಿವು ಪಡೆದುಕೊಂಡರು.

