ಸುಳ್ಯ: ಕನಕಮಜಲು ಗ್ರಾಮದ ಸುಣ್ಣಮೂಲೆ ಜನತಾ ಕಾಲೋನಿಯ ನಿವಾಸಿ ರಾಮ ಎಂಬುವವರಿಗೆ ಸೇರಿದ ವಸತಿ ಮನೆಯಲ್ಲಿ ಡಿಸೆಂಬರ್ 20 ರ ತಡರಾತ್ರಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ

