Featured, ಇತರೆ, ಸ್ಥಳೀಯ

ರಾಜ್ಯದ ಎಲ್ಲ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ

ನಿಯಮಿತವಾಗಿ ನೀರು ಕುಡಿಯುವ ಅರಿವು ಮೂಡಿಸಲು ಸರ್ಕಾರಿ–ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿಯಮಿತವಾಗಿ ನೀರು ಕುಡಿಯುವಂತೆ ಜ್ಞಾಪಿಸಲು ಇನ್ನುಮುಂದೆ ‘ವಾಟರ್ ಬೆಲ್’ (Water Bell) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವ ಅರಿವು ಕಡಿಮೆ ಇರುವುದರಿಂದ, ಅವರ ಆರೋಗ್ಯ ಮತ್ತು ಸಮಗ್ರ ಬೆಳವಣಿಗೆಗೆ ಅಗತ್ಯವಾದ ನೀರಿನ ಮಹತ್ವವನ್ನು ಮನಗಾಣಿಸಲು ಈ ಕ್ರಮ ಕೈಗೊಳ್ಳಲಾಗಿದೆ. ನೀರು ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್‌ಕೆಜಿ, ಯುಕೆಜಿ ಸೇರಿದಂತೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಎಲ್ಲಾ ಶಾಲೆಗಳಲ್ಲಿ ನಿರ್ದಿಷ್ಟ ಸಮಯಕ್ಕೆ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಸೂಚಿಸಲಾಗಿದೆ.
‘ವಾಟರ್ ಬೆಲ್’ ಅನುಷ್ಠಾನ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿತ್ತು. ಅದರಂತೆ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ, ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಶಾಲೆಗಳಲ್ಲಿ ಆಗಾಗ್ಗೆ ವಾಟರ್ ಬೆಲ್ ಬಾರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಆದೇಶಿಸಿದೆ.

Related Posts