ಸುಳ್ಯ ಪೊಲೀಸ್ ಠಾಣೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ಅವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಹಾಗೂ ದೇಶದ ಏಕತೆ–ಸೌಹಾರ್ದತೆಯ ಬಗ್ಗೆ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಬಿ.ಪಿ. ಸಂತೋಷ್, ಸರಸ್ವತಿ ಬಿ.ಟಿ., ಠಾಣೆಯ ಸಹಾಯಕ ಉಪನಿರೀಕ್ಷಕರುಗಳು ಹಾಗೂ ಇತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು


