ಸ್ಥಳೀಯ

ಬೆಳ್ಳಾರೆಯಲ್ಲಿ ಎಸ್‌ಡಿಪಿಐ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ಳಾರೆ ಬ್ಲಾಕ್ ಸಮಿತಿಯ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಸದಸ್ಯರಾದ ಅಬ್ದುಲ್ ರಹಮಾನ್ ಬೆಳ್ಳಾರೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, “ಸಂವಿಧಾನವು ನಮಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ನಾವೆಲ್ಲರೂ ಬದ್ಧರಾಗಿರಬೇಕು,” ಎಂದು ಕರೆ ನೀಡಿದರು.

ಬೆಳ್ಳಾರೆ ಬ್ಲಾಕ್ ಸಮಿತಿಯ ಕಾರ್ಯದರ್ಶಿ ಹಮೀದ್ ಮರಕಡ ಅವರು ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಸಂವಿಧಾನದ ಆಶಯಗಳನ್ನು ಒಳಗೊಂಡ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪಳ್ಳಿಮಜಲು ಬ್ರಾಂಚ್ ಸಮಿತಿಯ ಕಾರ್ಯದರ್ಶಿ ಅಬ್ಬಾಸ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.

Related Posts