Featured, ಇತರೆ, ಸ್ಥಳೀಯ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ಸುಳ್ಯ: ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಸಡಗರ–ಸಂಭ್ರಮದಿಂದ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಶಾಲಾ ಸಂಚಾಲಕ ಹಾಗೂ ಸೂಡ ಅಧ್ಯಕ್ಷರಾದ ಕೆ. ಎಂ. ಮುಸ್ತಫ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಅಬ್ದುಲ್ ಲತೀಫ್ ಹರ್ಲಡ್ಕ, ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿರ್ದೇಶಕ ಎಸ್. ಎಂ. ಅಬ್ದುಲ್ ಹಮೀದ್, ಮುಖ್ಯಶಿಕ್ಷಕ ಇಲ್ಯಾಸ್ ಕಾಶಿಪಟ್ಟಣ, ಪಿಟಿಎ ಸಮಿತಿ ಸದಸ್ಯರಾದ ಎನ್. ಎ. ಅಬ್ದುಲ್ಲಾ ನಾವೂರು, ಎಸ್. ಪಿ. ಅಬೂಬಕ್ಕರ್, ಮುಹಿಯ್ಯದ್ದೀನ್ ಫ್ಯಾನ್ಸಿ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಶಿಕ್ಷಕಿ ಜಯಂತಿ ಸ್ವಾಗತಿಸಿ, ಶಿಕ್ಷಕ ರಂಜಿತ್ ವಂದಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿ, ಗಣರಾಜ್ಯೋತ್ಸವದ ಮಹತ್ವವನ್ನು ನೆನಪಿಸಲಾಯಿತು.

Related Posts