Featured, ಇತರೆ, ಸ್ಥಳೀಯ

ಮಹಾರಾಷ್ಟ್ರ : ಬಾರಾಮತಿಯಲ್ಲಿ ವಿಶೇಷ ವಿಮಾನ ಪತನ: ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ

ಮುಂಬೈ, ಜ.28:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬಾರಾಮತಿ ಜಿಲ್ಲೆಯ ಕಾಡು ಪ್ರದೇಶದಲ್ಲಿ ಪತನಗೊಂಡು ಭೀಕರ ದುರಂತ ಸಂಭವಿಸಿದೆ ವರದಿಯಾಗಿದೆ. ಈ ಅಪಘಾತದಲ್ಲಿ ಅಜಿತ್ ಪವಾರ್ ಸೇರಿ ವಿಮಾನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮುಂಬೈನಿಂದ ಕಾರ್ಯನಿಮಿತ್ತ ಬಾರಾಮತಿಗೆ ತೆರಳುತ್ತಿದ್ದ ವೇಳೆ, ಲ್ಯಾಂಡಿಂಗ್‌ಗೆ ಸಿದ್ಧವಾಗಿದ್ದ ವಿಮಾನ ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ಕಾಡು ಪ್ರದೇಶದಲ್ಲಿ ಉರುಳಿದಂತಾಗಿದೆ. ಪತನದ ಬಳಿಕ ವಿಮಾನಕ್ಕೆ ಬೆಂಕಿ ತಗುಲಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಯಿತು ಎಂದು ಹೇಳಲಾಗಿದೆ.
ವಿಮಾನದಲ್ಲಿದ್ದ ಪೈಲಟ್ ಹಾಗೂ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸಿದ್ದಾರೆ ಎನ್ನಲಾಗಿದೆ.
ಎನ್‌ಸಿಪಿ ಪಕ್ಷದ ಪ್ರಮುಖ ನಾಯಕ ಹಾಗೂ ಬಾರಾಮತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಜಿತ್ ಪವಾರ್, ಇಂದು ಬಾರಾಮತಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಬರುತ್ತಿದ್ದರು ಎಂದು ಹೇಳಲಾಗಿದೆ. ಹಲವು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು ಮಹಾರಾಷ್ಟ್ರ ರಾಜಕಾರಣದಲ್ಲಿ ಅನುಭವಿ ಹಾಗೂ ಪ್ರಭಾವಿ ನಾಯಕರಾಗಿದ್ದರು.
ಈ ದುರಂತದ ಸುದ್ದಿ ಕೇಳುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಶೋಕ ಮಡುಗಟ್ಟಿದಂತಾಗಿದೆ

Related Posts