Featured, ಅಂಕಣ, ಸ್ಥಳೀಯ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

ಬೆಳ್ತಂಗಡಿ (ಫೆ-04): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಆಗಮಿಸಿ, (BLA) ಬೂತ್ ಲೆವೆಲ್ ಏಜೆಂಟ್‌ಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸಾಲಿ ಮದ್ದಡ್ಕ, ಸದಸ್ಯರಾದ ಮುಸ್ತಫಾ ಜಿ.ಕೆ, ಅಶ್ರಫ್ ಕಟ್ಟೆ, ಮೊಹಮ್ಮದ್ ಅಲಿ ಹಾಗೂ ಬೆಳ್ತಂಗಡಿ ಕ್ಷೇತ್ರದ (BLA) ಬೂತ್ ಲೆವೆಲ್ ಏಜೆಂಟ್‌ಗಳು ಭಾಗವಹಿಸಿದ್ದರು.

Related Posts