Featured, ಅಂಕಣ, ಸ್ಥಳೀಯ

ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್:-ಸಹಳಾ ಕುಪ್ಪೆಪದವು

ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ಹೆಮ್ಮೆಯ ವಿದ್ಯಾರ್ಥಿನಿ ಸಹಳಾ ಕುಪ್ಪೆಪದವು ಅವರು ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪೆಷಲ್ ಒಲಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್–2026ರಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.

ಜೂನಿಯರ್ ವಿಭಾಗದಲ್ಲಿ ನಡೆದ ಶಾಟ್‌ಪುಟ್ ಹಾಗೂ 4×100 ಮೀಟರ್ ಮಿಕ್ಸ್ಡ್ ರಿಲೇ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಅದೇ ರೀತಿ 200 ಮೀಟರ್ ಓಟ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ತಮ್ಮ ಅಸಾಧಾರಣ ಸಾಧನೆಯ ಮೂಲಕ ಸಹಳಾ ಕುಪ್ಪೆಪದವು ಅವರು ಊರಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಈ ಸಾಧನೆಗೆ ಸ್ಥಳೀಯರು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Posts