ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಕಚೇರಿಗೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಭೇಟಿ – ಮಾಸ್ಟರ್ ಪ್ಲಾನ್ ಕುರಿತು ಸಮಾಲೋಚನೆ
ಬಂಟ್ವಾಳ:
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ (ಸೂಡ) ಕೆ. ಎಂ. ಮುಸ್ತಫ ಅವರು ಇಂದು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬೂಡ) ಕಚೇರಿಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಮಾಸ್ಟರ್ ಪ್ಲಾನ್ ಸಂಬಂಧಿತ ಮಾಹಿತಿ ಸಂಗ್ರಹಿಸಿದರು

ಭೇಟಿಯ ವೇಳೆ ಏಕ ವಿನ್ಯಾಸ ಅನುಮೋದನೆ, ವಾಸ್ತವ್ಯ ಹಾಗೂ ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದ ನಿಯಮಗಳು, ರಸ್ತೆ ಮಾರ್ಜಿನ್ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ನಗರಾಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಅಭಿಪ್ರಾಯ ವಿನಿಮಯವೂ ನಡೆಯಿತು.
ಈ ಸಂದರ್ಭ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕೆ. ಎಂ. ಮುಸ್ತಫ ಅವರನ್ನು ಶಾಲು ಮತ್ತು ಮಾಲೆ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಸದಸ್ಯ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ, ಪ್ರಾಧಿಕಾರದ ಸದಸ್ಯರಾದ ಮನೋಹರ್ ಕುಲಾಲ್, ಹರೀಶ್ ಅಜ್ಜಿಬೆಟ್ಟು, ಅಬ್ದುಲ್ ರಝಕ್ ಗೂಡಿನ ಬಳಿ ಮೊದಲಾದವರು ಉಪಸ್ಥಿತರಿದ್ದರು.


Scroll To Top