ಇತರೆ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಕುದ್ಮಾರು:
ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ ಎಂಆರ್‌ಪಿಎಲ್ (MRPL) ಸಿಎಸ್‌ಆರ್ ಫಂಡ್‌ನ ₹15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಶಾಲಾ ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದ್ದು, ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳು ರಜೆಗೆ ತೆರಳುವ ಮುನ್ನವೇ ಸಂಸದರಿಂದ ಉದ್ಘಾಟನೆ ನೆರವೇರಿಸುವಂತೆ ನಿರ್ಧರಿಸಲಾಯಿತು. ಈ ಕಾರ್ಯ ಯಶಸ್ವಿಯಾಗಲು ಎಲ್ಲರೂ ಸಹಕಾರ ನೀಡಿ ಒಟ್ಟಾಗಿ ಕೆಲಸ ಮಾಡುವಂತೆ ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು, ಭಾರತೀಯ ಜನತಾ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಸದಸ್ಯರು, ಶಾಲೆಯ ಸಿಆರ್‌ಪಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
ಈ ಹೈಟೆಕ್ ಶೌಚಾಲಯ ನಿರ್ಮಾಣದಿಂದ ಶಾಲಾ ಮಕ್ಕಳಿಗೆ ಉತ್ತಮ ಸೌಲಭ್ಯ ದೊರಕುವ ಜೊತೆಗೆ, ಸ್ವಚ್ಛತೆ ಮತ್ತು ಆರೋಗ್ಯದ ಅರಿವು ಹೆಚ್ಚಲಿದೆ ಎಂಬ ವಿಶ್ವಾಸವನ್ನು ಭಾಗವಹಿಸಿದವರು ವ್ಯಕ್ತಪಡಿಸಿದರು.

Related Posts