ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG 2026) ಬರೆಯಲಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಿಹಿ ಸುದ್ದಿ ನೀಡಿದೆ. ತಾಂತ್ರಿಕ ತೊಂದರೆ ಹಾಗೂ ಬೋರ್ಡ್ ಪರೀಕ್ಷೆಗಳ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಮಾರ್ಚ್ 11, 2026 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮಾರ್ಚ್ 11ರ ರಾತ್ರಿ 9:00 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅಂದು ರಾತ್ರಿ 11:50 ರವರೆಗೆ ಶುಲ್ಕ ಪಾವತಿಸಲು ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ exams.nta.ac.in/NEET ಗೆ ಭೇಟಿ ನೀಡಬಹುದಾಗಿದೆ. ಮೇ 3, 2026 ರಂದು ದೇಶಾದ್ಯಂತ ಪರೀಕ್ಷೆ ನಡೆಯಲಿದೆ ಎಂದು ಎನ್ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

