ಮಂಗಳೂರು, ಮಾ.17: 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮವನ್ನು ಮಾರ್ಚ್ 28, 2026ರಂದು ಶನಿವಾರ ಬೆಳಿಗ್ಗೆ 8.30 ಗಂಟೆಗೆ ಮಂಗಳೂರಿನ ಜಪ್ಪಿನ ಮುಗೇರಿನಲ್ಲಿರುವ ಯೆನೆಪೋಯ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ಹಜ್ ಯಾತ್ರೆಗೆ ತೆರಳಲಿರುವ ಎಲ್ಲಾ ಹಜ್ಜಾಜ್‌ಗಳು ಭಾರತ ಸರ್ಕಾರದಿಂದ ಇತ್ತೀಚೆಗೆ ನೀಡಲಾದ ಮೆಡಿಕಲ್ ಕಾರ್ಡ್‌ನ್ನು ಕಡ್ಡಾಯವಾಗಿ ತರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹಾಜಿ ವೈ. ಅಬ್ದುಲ್ಲಾ ಕುಂಞಿ ಯೆನೆಪೋಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
📞 94481 90557
📞 63626 20674
📞 99166 47651


