ಇತರೆ, ಸ್ಥಳೀಯ

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಸೇವೆ ಮತ್ತೆ ಪ್ರಾರಂಭ : ದಿನಕ್ಕೆ 20 ಟೋಕನ್ ಲಭ್ಯ

ಸುಳ್ಯ: ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳು ಮತ್ತೆ ಆರಂಭವಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಅಂಚೆ ಕಛೇರಿಯಲ್ಲಿ ಪ್ರತಿದಿನ ಬೆಳಿಗ್ಗೆ 20 ಟೋಕನ್‌ಗಳನ್ನು ವಿತರಿಸಲಾಗುತ್ತಿದ್ದು, ಟೋಕನ್ ಪಡೆದವರಿಗೆ ಮಾತ್ರ ಸೇವೆ ನೀಡಲಾಗುತ್ತದೆ ಎಂದು ಅಂಚೆ ಪಾಲಕರು ತಿಳಿಸಿದ್ದಾರೆ.
ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಕಾರ್ಯಗಳನ್ನು ಸುಗಮವಾಗಿ ನಡೆಸಲು ಈ ವ್ಯವಸ್ಥೆ ಜಾರಿಗೆ ತಂದಿರುವುದಾಗಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಆಗಮಿಸಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.