9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನ ಕೊಣಾಜೆ ಪೊಲೀಸರು ಪೋಕ್ಷೆ ಪ್ರಕರಣದಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ಉಳ್ಳಾಲ, ಮಾ.18: 9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನ ಕೊಣಾಜೆ ಪೊಲೀಸರು ಪೋಕ್ಸ್ ಪ್ರಕರಣದಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆಕಾರು ಗ್ರಾಮದ ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಆರೋಪಿ ಸಂತ್ರಸ್ತ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಪ್ರೇರೇಪಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಕೊಣಾಜೆ ಪೊಲೀಸರು ಪೋಕ್ಷೆ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.




m
