Featured, ಇತರೆ, ಸ್ಥಳೀಯ

ಸುಳ್ಯ: ಕೊಲ್ಚಾರು ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ – ಸವಾರ ಮೃತ್ಯು

ಸುಳ್ಯ ತಾಲೂಕಿನ ಕೊಲ್ಚಾರು  ಇಳಿಜಾರು ರಸ್ತೆಯಲ್ಲಿ ಸಂಭವಿಸಿದ ದಾರುಣ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮಾಹಿತಿಯ ಪ್ರಕಾರ ಬಂದಡ್ಕ ಭಾಗದಿಂದ ಸುಳ್ಯ ಕಡೆ ಬೈಕ್ ನಲ್ಲಿ ಆಗಮಿಸುತ್ತಿದ್ದ ಪಾಲರು ಮೂಲದ ವ್ಯಕ್ತಿ ಕೊಲ್ಚಾರು ಬಳಿ ಇಳಿಜಾರು ರಸ್ತೆಯಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಡಿಕ್ಕಿಯ ತೀವ್ರತೆಯಿಂದಾಗಿ ಸವಾರನು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

m

Related Posts