ಸುಳ್ಯ ಸಮೀಪದ ಬೊಳುಬೈಲು ಪ್ರದೇಶದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಿನ್ನಿಂಗಾರ್ ಮೂಲದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಲೈಫ್ ಕೇರ್ ಆಂಬುಲೆನ್ಸ್ ಮೂಲಕ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.





m
