ಸುಳ್ಯ: ಮೊಗರ್ಪಣೆ ಸಮೀಪ ನಿನ್ನೆ ರಾತ್ರಿ ಕಂಟೈನರ್ ಲಾರಿ ಪಲ್ಟಿಯಾಗಿ ಬಿದ್ದ ಸ್ಥಳದಲ್ಲಿ ರಸ್ತೆಗೆ ಡೀಸೆಲ್ ಚೆಲ್ಲಿರುವ ಪರಿಣಾಮ ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.
ಮಾ. 25ರಂದು ರಾತ್ರಿ ಸುಮಾರು 12.45ರ ವೇಳೆಗೆ ಈ ಘಟನೆ ನಡೆದಿದೆ. ಲಾರಿ ಪಲ್ಟಿಯಾದ ಬಳಿಕ ರಸ್ತೆಯ ಮೇಲೆ ಹರಡಿದ್ದ ಡೀಸೆಲ್ ಗಮನಿಸದೇ ಬಂದ ದ್ವಿಚಕ್ರ ವಾಹನ ಸವಾರನು ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದ್ದಾನೆ.
ಅಪಘಾತದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣವೇ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ





m
