ಬೀಮ್ ಆರ್ಮಿ ಸಂಘಟನೆಯ ಸುಳ್ಯ ತಾಲೂಕು ಘಟಕದ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ವಿವಿಧ ಗ್ರಾಮಗಳು ಹಾಗೂ ನಗರ ಪ್ರದೇಶಗಳಿಂದ ಪ್ರತಿನಿಧಿಗಳನ್ನು ಒಳಗೊಂಡಂತೆ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. : ಸುಂದರ್ ನಿಡ್ಪಳ್ಳಿ , ಜಿಲ್ಲಾ ಅಧ್ಯಕ್ಷ

ಸುಳ್ಯ: ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಸಮಿತಿ ರಚನಾ ಸಭೆಯು ಮಾರ್ಚ್ 29ರಂದು ಜಿಲ್ಲಾ ಅಧ್ಯಕ್ಷರಾದ ಸುಂದರ್ ನಿಡ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ, ಮಡಿಕೇರಿ ಮೂಲದ ನ್ಯಾಯವಾದಿ ಕುಂಞಿ ಅಬ್ದುಲ್ಲಾ ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ಆಶಯಗಳೇ ನಮ್ಮ ದೇಶದ ನಿಜವಾದ ಸಂಸ್ಕೃತಿ ಎಂದು ಅವರು ಹೇಳಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಮೂಲ ತತ್ವಗಳಾದ ಜನರ ಅಧಿಕಾರ, ಸಮಾನತೆ, ಸ್ವಾತಂತ್ರ್ಯ ಹಾಗೂ ನ್ಯಾಯ ಇತ್ಯಾದಿಗಳು ನಿಧಾನವಾಗಿ ಕುಗ್ಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಅದರ ಬದಲಿಗೆ ಆಡಳಿತದ ಅಧಿಕಾರ ಕೆಲವರ ಕೈಯಲ್ಲಿ ಕೇಂದ್ರೀಕೃತವಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದರು.
ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾದವರ ಪರ ನಿಂತು, ಅವರ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ನಿರಂತರ ಹೋರಾಟ ನಡೆಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಸಭೆಯಲ್ಲಿ ಭೀಮ್ ಆರ್ಮಿ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವುದು, ಸಾಮಾಜಿಕ ನ್ಯಾಯ ಹಾಗೂ ಸಮಾನತೆಗಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಚರ್ಚಿಸಲಾಯಿತು. ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಮುಂದಿನ ಕಾರ್ಯಯೋಜನೆಗಳನ್ನೂ ರೂಪಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಮಿತಿ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಮುದ್ದಪ್ಪ ಭಯಂಬು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕಾಯರ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಇಕ್ಬಾಲ್ ಸುಣ್ಣ ಮೂಲೆ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ವಿಭಾಗೀಯ ಉಸ್ತುವಾರಿ ರಾಜಾ ಚಂಡ್ತಿಮಾರ್, ಗೌರವಾಧ್ಯಕ್ಷ ಅಣ್ಣು ಸಾಧನ, ಉಪಾಧ್ಯಕ್ಷ ಉಮ್ಮರ್ ಕೆ.ಎಸ್., ಕೊರಗಪ್ಪ ಕೊಯಿಲ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಬೀಮ್ ಆರ್ಮಿ ಸಂಘಟನೆಯ ನೂತನ ಸಮಿತಿ
ಸುಳ್ಯ ತಾಲೂಕು ಬೀಮ್ ಆರ್ಮಿ ಸಂಘಟನೆಯ ನೂತನ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು, ವಿವಿಧ ಗ್ರಾಮಗಳು ಹಾಗೂ ನಗರ ಪ್ರದೇಶಗಳಿಂದ ಪ್ರತಿನಿಧಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಅಜ್ಜವರ ಗ್ರಾಮದ ಮುದ್ದಪ್ಪ ಭಯಂಬು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಲ್ಮಕಾರು ಗ್ರಾಮದ ಸದಾನಂದ, ಐವರ್ಣಾಡು ಗ್ರಾಮದ ಕೊಯಿಲದ ಗುರುವ ಹಾಗೂ ಸುಳ್ಯ ನಗರದ ಗಾಂಧಿ ನಗರದ ಕಬೀರ್ ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಐವರ್ನಾಡು ಗ್ರಾಮದ ಪದ್ಮಯ್ಯ ಆಯ್ಕೆಯಾಗಿದ್ದು, ಕೋಶಾಧಿಕಾರಿಯಾಗಿ ಇಕ್ಬಾಲ್ ಸುಣ್ಣ ಮೂಲೆ ನೇಮಕಗೊಂಡಿದ್ದಾರೆ.
ಸಂಘಟನಾ ಕಾರ್ಯದರ್ಶಿಗಳಾಗಿ ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ ರವೀಂದ್ರ, ಕಲಂದರ್ ಎಲಿಮಲೆ, ಕಲ್ಮಕಾರು ಗ್ರಾಮದ ಅವಿನ್ ಹಾಗೂ ರಶೀದ್ ಜಟ್ಟಿ ಪಳ್ಳ ಅವರನ್ನು ಆಯ್ಕೆ ಮಾಡಲಾಗಿದೆ.
ಈ ನೇಮಕಾತಿಯ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಸಾಮಾಜಿಕ ನ್ಯಾಯ ಹಾಗೂ ಹಕ್ಕುಗಳಿಗಾಗಿ ಚುರುಕಿನ ಕಾರ್ಯಾಚರಣೆ ನಡೆಸುವುದಾಗಿ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.




m
