ಬಂಟ್ವಾಳ: ಕೊಡಾಜೆ ಟರ್ಫ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಏಪ್ರಿಲ್ 5ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಡಿಗ್ನಿಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮತ್ತು ಬ್ಲಡ್ ಡೋರ್ಸ್ ಮಂಗಳೂರು ಇವರ ಸಹಯೋಗದಲ್ಲಿ ನಡೆಯಲಿದೆ.

ನೇರಳಕಟ್ಟೆ ಸಮೀಪದಲ್ಲಿರುವ ಕೊಡಾಜೆ ಡಿಗ್ನಿಟಿ ಇಂಗ್ಲಿಷ್ ಮೀಡಿಯಂ ಶಾಲಾ ಆವರಣದಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




m
