ಬೆಂಗಳೂರು:
ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ ಎಂಬ ಮಾಹಿತಿ ಸಂಪೂರ್ಣ ತಪ್ಪು ಎಂದು ಬೆಂಗಳೂರು ದಕ್ಷಿಣ ಅಪರ ಸಾರಿಗೆ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರವು 2019ರ ಏಪ್ರಿಲ್ 1ರ ಒಳಗಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೈ-ಸಿಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಹರಿದಾಡುತ್ತಿರುವ “HSRP ಕಡ್ಡಾಯವಲ್ಲ” ಎಂಬ ಸುದ್ದಿಗೆ ಯಾವುದೇ ಆಧಾರವಿಲ್ಲ ಎಂದು ಇಲಾಖೆ ತಿಳಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರವು ತಕ್ಷಣದ ಕಠಿಣ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸೂಚನೆ ನೀಡಿದರೂ, ಕೇಂದ್ರ ಸರ್ಕಾರದ ಕಡ್ಡಾಯ ಆದೇಶಕ್ಕೆ ಯಾವುದೇ ತಡೆ ನೀಡಿಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ವಾಹನ ಮಾಲೀಕರು ತಪ್ಪು ಮಾಹಿತಿಗೆ ಒಳಗಾಗದೆ ಶೀಘ್ರವೇ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಪ್ರಕಟಣೆ ಮೂಲಕ ಮನವಿ ಮಾಡಿದೆ.





m
