ಮಡಿಕೇರಿ: ಕೊಡಗು ಜಿಲ್ಲೆಯ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಅವರು ನಾಲ್ಕು ದಿನಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ. ನಿರಂತರ ನಾಲ್ಕು ದಿನಗಳ ಶೋಧ ಕಾರ್ಯಾಚರಣೆಯು ಯಶಸ್ವಿಯಾಗಿದ್ದು, ಇದೀಗ ಆತಂಕಕ್ಕೆ ತೆರೆ ಬಿದ್ದಿದೆ.
ಶರಣ್ಯ ಅವರು ಕಕ್ಕಬ್ಬೆ ಸಮೀಪದ ಕಬ್ಬಿನಕಾಡು ಹೋಂ ಸ್ಟೇನಲ್ಲಿ ತಂಗಿದ್ದು, ಕಳೆದ ಗುರುವಾರ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದರು. ಈ ವೇಳೆ ತಮ್ಮ ತಂಡದಿಂದ ಬೇರ್ಪಟ್ಟು ದಾರಿ ತಪ್ಪಿದ ಅವರು, ಸಂಪರ್ಕ ಸಾಧಿಸಲು ಸಾಧ್ಯವಾಗದೆ ನಾಪತ್ತೆಯಾಗಿದ್ದರು.
ಘಟನೆಯ ನಂತರ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದರು. ಡ್ರೋನ್ ಮತ್ತು ಶ್ವಾನ ದಳವನ್ನು ಬಳಸಿ ತೀವ್ರ ಹುಡುಕಾಟ ಮುಂದುವರಿಸಿದರೂ ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ನಂತರ ಶರಣ್ಯ ಅವರು ದಾರಿ ಸಿಗದೆ ಪಾಳು ಬಿದ್ದ ಬಂಗಲೆಯಲ್ಲಿ ಆಶ್ರಯ ಪಡೆದಿರುವುದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಆಧಾರದಲ್ಲಿ ಶೋಧ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡು, ಇಂದು ಅವರು ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.





m
