ವಾಣಿಜ್ಯ ವಿಭಾಗದಲ್ಲಿ 556 ಅಂಕಗಳೊಂದಿಗೆ ಡಿಸ್ಟಿಂಕ್ಷನ್ – ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿ
ಸುಳ್ಯ: ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಫಾತಿಮಾತ್ ಶಿಹಾನ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅವರು 556 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಅಧ್ಯಯನದಲ್ಲಿ ನಿರಂತರ ಶ್ರದ್ಧೆ ಮತ್ತು ಪರಿಶ್ರಮದಿಂದ ಗುರುತಿಸಿಕೊಂಡಿರುವ ಫಾತಿಮಾತ್ ಶಿಹಾನ ಅವರ ಈ ಸಾಧನೆ ಕಾಲೇಜಿನ ಶೈಕ್ಷಣಿಕ ಮಟ್ಟವನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ.
ಜಟ್ಟಿಪಳ್ಳ ನಿವಾಸಿಗಳಾದ ನೌಶಾದ್ ಎಂ.ಎಸ್ ಹಾಗೂ ಪೌಸಿಯ ಅವರ ಪುತ್ರಿ ಸಾಧಕ ವಿದ್ಯಾರ್ಥಿನಿಯ ಈ ಯಶಸ್ಸಿಗೆ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.





m
