ಸುಳ್ಯದ ರೋಟರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ನಿಷ್ಮ ಕೆ.ಎ. ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 600 ಅಂಕಗಳಲ್ಲಿ 536 ಅಂಕಗಳನ್ನು ಪಡೆದು ಅವರು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕವಾಗಿ ನಿರಂತರ ಶ್ರದ್ಧೆ ಮತ್ತು ಪರಿಶ್ರಮದಿಂದ ಈ ಸಾಧನೆ ಮಾಡಿರುವ ನಿಷ್ಮ ಅವರು ಶಾಲೆಯ ಹೆಮ್ಮೆಯಾಗಿ ಹೊರಹೊಮ್ಮಿದ್ದಾರೆ.
ನಿಷ್ಮ ಅವರು ಸುಳ್ಯ ಗಾಂಧಿನಗರ ನಿವಾಸಿಗಳಾದ ಬಶೀರ್ ಮತ್ತು ರಹಮತ್ ದಂಪತಿಗಳ ಪುತ್ರಿಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಶಿಕ್ಷಕರು, ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.




m
